ಕುಂದಾಪುರ: ಗಂಗೊಳ್ಳಿಯ ಮೀನುಗಾರಿಕೆ ಬಂದರಿನ ಜೆಟ್ಟಿ ಮತ್ತೊಮ್ಮೆ ಕುಸಿದು ಬಿದ್ದಿದ್ದು, ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯ ಮೀನುಗಾರರು ಇದು ಅವೈಜ್ಞಾನಿಕ ಕಾಮಗಾರಿಯ ಪರಿಣಾಮ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತ ಮಾಧ್ಯಮ ವರದಿ ಗಮನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಕಾಮಗಾರಿಯ ಗುತ್ತಿಗೆದಾರ ನೀಡಿದ್ದ ಕಮಿಷನ್ ಎಷ್ಟು ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಬಂದ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಜೆಟ್ಟಿ ಕುಸಿತ ಸ್ಥಳ ಪರಿಶೀಲನೆ ನಡೆಸಿದರು. ಸಂಬಂಧಪಟ್ಟ ಇಂಜಿನಿಯರ್ ಮತ್ತು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಸಿದರು.
ಬಳಿಕ ಮಾತನಾಡಿದ ಸಚಿವರು, ನಾನು ವಿಷಯ ತಿಳಿದು ಇಲ್ಲಿಗೆ ಬಂದಿದ್ದೇನೆ. ಈ ರೀತಿ ಆಗಬಾರದು. ಈ ಘಟನೆ ಬಗ್ಗೆ ಖಾಸಗಿಯವರಿಂದ ತನಿಖೆ ನಡೆಸಿ ವರದಿ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಗುತ್ತಿಗೆದಾರರು ಮತ್ತು ಇಂಜಿನಿಯರ್ ಗಳನ್ನು ಬ್ಲ್ಯಾಕ್ ಲಿಸ್ಟ್ ಗೆ ಹಾಕಲಾಗುವುದು ಎಂದು ಅಸಮಾಧಾನ ಹೊರ ಹಾಕಿದರು.
PublicNext
29/09/2022 10:08 pm