ಉಡುಪಿ: ಇವತ್ತು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಿಸಿದೆ. ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾರತವನ್ನು ಎಲ್ಲಿ ವಿಭಜನೆ ಮಾಡಿದ್ದರೋ ಅಲ್ಲಿ ಭಾರತ್ ಜೋಡೋ ಮಾಡಿ ಎಂದು ಟೀಕೆ ಮಾಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿವೆ, ಪಾಕ್ ಆಕ್ರಮಿತ ಕಾಶ್ಮೀರ ಯಾರ ಕೊಡುಗೆ? ಹಿಮಾಲಯದ ನೆಲದಲ್ಲಿ ಒಂದು ಹುಲ್ಲು ಕಡ್ಡಿಯೂ ಬೆಳೆಯುವುದಿಲ್ಲ ಎಂದು ನೆಹರು ಹೇಳಿದ್ದರು. ಹಾಗಾಗಿ ಹಿಮಾಲಯವನ್ನು ಬಿಟ್ಟುಕೊಡಲಾಯಿತು. ತಿನ್ ಭಿಗಾದಲ್ಲಿ ಭಾರತ ಜೋಡೋ ಮಾಡಿ. ಪಾಕ್ ಅಕ್ರಮಿತ ಕಾಶ್ಮೀರದಲ್ಲಿ ಭಾರತ ಜೋಡೋ ಮಾಡಿ. ರಾಹುಲ್ ಗಾಂಧಿ ಭಾರತದಲ್ಲಿ ಭಾರತ್ ಜೋಡೋ ಮಾಡುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದರು. ಪಾಕಿಸ್ತಾನ , ಚೀನಾ, ಬಾಂಗ್ಲಾ ಗಡಿಯಲ್ಲಿ ನಿಮ್ಮ ಯಾತ್ರೆ ಮಾಡಿ ಎಂದ ಸಚಿವೆ, ಪಾಕಿಸ್ತಾನ ಜಿಂದಾಬಾದ್ ಅಂದವರ ಜೊತೆ ಯಾತ್ರೆ ಮಾಡುತ್ತಾ ಇದ್ದೀರಿ. ಭಾರತ್ ಜೋಡೋ ಮಾಡ್ತಾ ಇದ್ದೀರಾ ? ಭಾರತ್ ತೋಡೋ ಮಾಡ್ತಾ ಇದ್ದೀರಾ? ಸ್ಪಷ್ಟಪಡಿಸಿ ಎಂದು ಹೇಳಿದ್ದಾರೆ.
PublicNext
30/09/2022 12:07 pm