ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಭಾರೀ ಮಳೆಯಿಂದ ಅಡಿಕೆ ಬೆಳೆಗೆ ಹಾನಿ: ಪರಿಹಾರಕ್ಕೆ ಒತ್ತಾಯಿಸಿ ರೈತಸಂಘದಿಂದ ಪ್ರತಿಭಟನೆ

ಪುತ್ತೂರು: ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ, ಹಸಿರುಸೇನೆಯಿಂದ ಇಂದು(ಅಕ್ಟೋಬರ್‌ 1) ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ರೈತಸಂಘದ ಕಚೇರಿಯಿಂದ ಮೆರವಣಿಗೆ ಮೂಲಕ ಹೊರಟ ರೈತಸಂಘದ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಮುಂದೆ ಸೇರಿ ಪ್ರತಿಭಟನೆ ನಡೆಸಿದರು. ಈ ಬಾರಿ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ ಶೇ. 64 ರಷ್ಟು ಅಡಿಕೆ ಸಂಪೂರ್ಣ ನಾಶವಾಗಿದೆ. ಕೃಷಿ ಹಾನಿಗಾಗಿ ಈಗಾಗಲೇ ರಾಜ್ಯ ಸರಕಾರ 300 ಕೋಟಿ ಬಿಡುಗಡೆ ಮಾಡಿದ್ದು, ಈ ಅನುದಾನದಲ್ಲಿ ಅಡಿಕೆ ಬೆಳೆಗಾರರಿಗೆ ಸಂದ ಬೇಕಾದ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ರೈತಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಒತ್ತಾಯಿಸಿದರು.

ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನನ್ನು ಈಗಾಗಲೇ ರದ್ದು ಪಡಿಸಲಾಗಿದ್ದರೂ, ರಾಜ್ಯ ಸರಕಾರ ಮಾತ್ರ ಈ ಕಾನೂನನ್ನು ಈವರೆಗೂ ರದ್ದುಗೊಳಿಸದೆ ಮೊಂಡುತನವನ್ನು ಪ್ರದರ್ಶಿಸುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

Edited By : Shivu K
Kshetra Samachara

Kshetra Samachara

01/10/2022 02:51 pm

Cinque Terre

4.09 K

Cinque Terre

1

ಸಂಬಂಧಿತ ಸುದ್ದಿ