ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸರಣಿ ಅಪಘಾತ; ಕಾರಿನಲ್ಲಿದ್ದವರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಸರಣಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರು ಪವಾಡ ಸದೃಶ ಪರಾಗಿದ್ದಾರೆ

ಕುಂದಾಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಲ್ಕಿ ಸಮೀಪದ ಕಾರ್ನಾಡು ಬೈಪಾಸ್ ಜಂಕ್ಷನ್ ಬಳಿ ಚಲಿಸುತ್ತಿರುವಾಗ ಎದುರಿನಿಂದ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಲಾರಿ ಏಕಾಏಕಿ ಬಲಬದಿಗೆ ಬಂದಿದ್ದು ಕಾರಿನ ಚಾಲಕ ಅಪಘಾತವನ್ನು ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಈ ಸಂದರ್ಭ ಕಾರಿನ ಟಯರ್ ಸ್ಪೋಟಗೊಂಡು ಕಾರು ತೀರಾ ಎಡಬದಿ ಹೆದ್ದಾರಿಗೆ ಚಲಿಸಿದ್ದು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬುಲೆಟ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಹಾಗೂ ಬುಲೆಟ್ ಸವಾರ ಪವಾಡ ಸದೃಶ ಪಾರಾಗಿದ್ದಾರೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By :
Kshetra Samachara

Kshetra Samachara

08/10/2022 02:48 pm

Cinque Terre

5.37 K

Cinque Terre

1

ಸಂಬಂಧಿತ ಸುದ್ದಿ