ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗೋವಾ ಸಿಎಂ ಮಾಂಸಾಹಾರ ತಿಂದು ಕೃಷ್ಣಮಠಕ್ಕೆ ಭೇಟಿ ನೀಡಬಹುದೆ? ಬ್ಲಾಕ್ ಕಾಂಗ್ರೆಸ್ ಪ್ರಶ್ನೆ!

ಉಡುಪಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಿ ಅಲ್ಲಿ ಮಾಂಸಹಾರ ಸೇವಿಸಿ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಬಿಜೆಪಿ ಶಾಸಕ ರಘುಪತಿ ಭಟ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಜತೆಗಿದ್ದರು. ಸಿದ್ದರಾಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತಾರೆಂದು ಗುಲ್ಲೆಬ್ಬಿಸುವ ಇವರಿಗೆ ಗೋವಾದ ಮುಖ್ಯಮಂತ್ರಿ ಮಾಂಸಹಾರ ಸೇವಿಸಿ ಕೃಷ್ಣ ಮಠಕ್ಕೆ ಭೇಟಿ ನೀಡಿರುವುದು ಕಾಣುವುದಿಲ್ಲವೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಹಿರಿಯ ಯತಿಗಳಿಂದ ಪ್ರಸಾದ ಸ್ವೀಕರಿಸಿದ ಗೋವಾ ಮುಖ್ಯಮಂತ್ರಿ ಮಾಂಸಹಾರ ಸೇವಿಸಿ ಭೇಟಿ ನೀಡಿದ್ದನ್ನು ಬಿಜೆಪಿ ಯಾಕೆ ಪ್ರಶ್ನಿಸುತ್ತಿಲ್ಲ? ಈಗ ಮಠ ಅಪವಿತ್ರವಾಗುವುದಿಲ್ಲವೇ? ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ಅವರ ವಿರುದ್ದ ಅಪಪ್ರಚಾರ ಮಾಡುವ ಬಿಜೆಪಿಯವರು ಇದೀಗ ಜನರಿಗೆ ಏನೆಂದು ಉತ್ತರಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಮುಂದುವರಿಸಿ ಕಾಂಗ್ರೆಸ್ ನಾಯಕರು ದೇವಸ್ಥಾನಕ್ಕೆ ಬೇಟಿ ಕೊಟ್ಟಾಗ ಅವರು ಮಾಂಸಹಾರ ತಿಂದು ಹೋದರು ಎಂದು ಗುಲ್ಲೆಬ್ಬಿಸಿ ಮುಗ್ದ ಜನರನ್ನು ದಾರಿ ತಪ್ಪಿಸುತ್ತಿರುವುದು, ಕಾಂಗ್ರೆಸ್ ಹಿಂದೂ ವಿರೋಧಿಗಳು ಎಂದು ಬಿಂಬಿಸುವುದಕ್ಕಾಗಿ ನಾವು ಸಿದ್ದಪಡಿಸಿರುವ ಟೂಲ್‌ಕಿಟ್‌ನ ಒಂದು ಭಾಗ ಎಂಬ ಸತ್ಯವನ್ನು ಒಪ್ಪಿಕೊಳ್ಳಿ ಎಂದು ಬಿಜೆಪಿ ನಾಯಕರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ.

Edited By : PublicNext Desk
PublicNext

PublicNext

10/10/2022 08:50 am

Cinque Terre

20.45 K

Cinque Terre

7

ಸಂಬಂಧಿತ ಸುದ್ದಿ