ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮನ್ ಕೀ ಬಾತ್ ವೀಕ್ಷಣೆ ಮತ್ತು ಸಂಜೀವಿನಿ ವಿಶೇಷ ಸಂತೆ ಸಿದ್ಧತೆ; ಪೂರ್ವಭಾವಿ ಸಭೆ

ಆಗಸ್ಟ್ 28 ರಂದು ಬೆಳಗ್ಗೆ 11 ಗಂಟೆಗೆ ಅಂಬಲಪಾಡಿ ಪಂಚಾಯತ್ ಸಹಯೋಗದೊಂದಿಗೆ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರಿಂದ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕೀ ಬಾತ್' ನೇರ ಪ್ರಸಾರ ವೀಕ್ಷಣೆ ಮತ್ತು ಸಂಜೀವಿನಿ ಒಕ್ಕೂಟದ ವಿಶೇಷ ಸಂತೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಎಂ.ಮಾತನಾಡಿ, ಜಿಲ್ಲೆಯಲ್ಲಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಮಹಿಳಾ ಸಬಲೀಕರಣದ ಸದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎನ್.ಆರ್.ಎಲ್.ಎಂ.ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಾದ್ಯಂತ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರು ಗುಡಿ ಕೈಗಾರಿಕೆಗಳಲ್ಲಿ ಉತ್ಪಾದಿಸಿದ ಗೃಹೋಪಯೋಗಿ ಉತ್ಪನ್ನಗಳನ್ನು 'ಸಂಜೀವಿನಿ ಸಂತೆ' ಮೂಲಕ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದು ಮಹಿಳೆಯರಲ್ಲಿ ಸ್ವಾವಲಂಬನೆಯ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ. ಸಾರ್ವಜನಿಕರು ಸಂಜೀವಿನಿ ಸಂತೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದರು.

ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಮನ್ ಕೀ ಬಾತ್ ಕಾರ್ಯಕ್ರಮದ ಆಗಸ್ಟ್ ತಿಂಗಳ ಆವೃತ್ತಿಯ ನೇರ ಪ್ರಸಾರ ವೀಕ್ಷಣೆಯು, ಪ್ರಧಾನಿ ಕಾರ್ಯಾಲಯದಿಂದ ಅನುಮೋದನೆಗೊಂಡ ರಾಜ್ಯದ ವೀಕ್ಷಣಾ ಕೇಂದ್ರ ಅಂಬಲಪಾಡಿ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ದೂರದರ್ಶನ ಮಾಧ್ಯಮದ ಸಹಯೋಗದೊಂದಿಗೆ ಆಗಸ್ಟ್ 28 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ನಡೆಯಲಿದೆ. ವೀಕ್ಷಣೆಯಲ್ಲಿ ವಿಶೇಷವಾಗಿ ತಾಲೂಕು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಲಿದ್ದಾರೆ. ಬೆಳಿಗ್ಗೆ ಗಂಟೆ 9.30ರಿಂದ ಸಂಜೀವಿನಿ ಒಕ್ಕೂಟದ 'ವಿಶೇಷ ಸಂತೆ'ಯೂ ನಡೆಯಲಿದೆ. ತಾಲೂಕು ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.

Edited By :
Kshetra Samachara

Kshetra Samachara

27/08/2022 04:31 pm

Cinque Terre

4 K

Cinque Terre

0

ಸಂಬಂಧಿತ ಸುದ್ದಿ