ಅನಾರೋಗ್ಯ ಪೀಡಿತ ಯಕ್ಷಗಾನ ಕಲಾವಿದರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿದರೆ ಕಲಾವಿದರಿಗೆ ಅನುಕೂಲವಾಗುತ್ತದೆ ಎಂದು ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಭಾನುವಾರ ಕಮಲಶಿಲೆಯ ಶ್ರೀ ಬ್ರಾಹ್ಮ ದುರ್ಗಾಪರಮೇಶ್ವರೀ ಕಲ್ಯಾಣ ಮಂಟಪದಲ್ಲಿ ನಡೆದ ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ| ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ, ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ಜಿ.ಎಲ್. ಹೆಗಡೆ ಕುಮಟಾ ವಹಿಸಿದ್ದರು.
ಪುತ್ತಿಗೆ ರಘುರಾಮ ಹೊಳ್ಳ, ಭಾಗವತ ಚಂದಯ್ಯ, ಭಾಗವತ ಉಮೇಶ ಭಟ್ ಬಾಡ, ಪ್ರಾಚಾರ್ಯ ಕೆ.ಪಿ. ಹೆಗಡೆ, ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕೋಲ್ಯಾರು ರಾಜು ಶೆಟ್ಟಿ, ಕೃಷ್ಣ ಗಾಣಿಗ (ಕುಷ್ಟ)ಕೋಡಿ, ಕೃಷ್ಣ ನಾಯ್ಕ ಜಿ. ಬೇಡ್ಕಣಿ, ಶುಭಾನಂದ ಶೆಟ್ಟಿ, ಬಾಲಕೃಷ್ಣ ನಾಯಕ್, ಕವ್ವಾಳೆ ಗಣಪತಿ ಭಾಗ್ವತ, ಎಸ್.ಪಿ. ಅಪ್ಪಯ್ಯ, ಡಿ. ಭೀಮಯ್ಯ, ಕೊಲ್ಲೂರು ಕೊಗ್ಗ ಆಚಾರ್ಯ, ಅಜಿತ್‌ಕುಮಾರ್ ಜೈನ್ ಅವರಿಗೆ ಯಕ್ಷಸಿರಿ ಪ್ರಶಸ್ತಿ ನೀಡಲಾಯಿತು. ಇದೇ ಮೊದಲ ಬಾರಿಗೆ ದಿ| ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಹೆಸರಿನ ದತ್ತಿನಿಧಿ ಪ್ರಶಸ್ತಿ ಪುರಸ್ಕೃತ ಹುಕ್ಕಲಮಕ್ಕಿ ಕಮಲಾಕರ ಹೆಗಡೆ ಅವರಿಗೆ ನೀಡಿ ಗೌರವಿಸಲಾಯಿತು. ಎಲ್.ಎಸ್. ಶಾಸ್ತ್ರಿ, ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ 2021ನೇ ಸಾಲಿನ ಪುಸ್ತಕ ಪ್ರಶಸ್ತಿ ಹಾಗೂ ಬಿ. ಸಂಜೀವ ಸುವರ್ಣ ಅವರಿಗೆ 2020ನೇ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರದಾನ ಪ್ರದಾನ ಮಾಡಲಾಯಿತು.
PublicNext
12/09/2022 12:52 pm