ಮಣಿಪಾಲ ಸಮೀಪದ ಮಣ್ಣಪಳ್ಳ ಕೆರೆಯಲ್ಲಿ ಮೀನಿಗೆ ಗಾಳ ಹಾಕುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಗಾಳ ಹಾಕುವ ಪರಿಕರಗಳು ಲಭ್ಯವಾಗಿವೆ.
ಘಟನಾ ಸ್ಥಳಕ್ಕೆ ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಮೃತ ವ್ಯಕ್ತಿಯನ್ನು ಕುಂದಾಪುರದ ಪ್ರಕಾಶ್ (35) ಎಂದು ಹೇಳಲಾಗಿದೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.
Kshetra Samachara
15/09/2022 03:57 pm