ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

70 ವರ್ಷಗಳಲ್ಲೇ ಕಾಣದ ಅಭಿವೃದ್ಧಿ ಈ ಬಾರಿ ಕಂಡಿದೆ: ಶಾಸಕ ಸುಕುಮಾರ್ ಶೆಟ್ಟಿ

ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಕಳೆದ 70 ವರ್ಷಗಳಲ್ಲಿ ಕಾಣದ ಅಭಿವೃದ್ಧಿ ಕಾರ್ಯಗಳು ಈ ಬಾರಿ ನಡೆದಿವೆ. ಕ್ಷೇತ್ರದಲ್ಲಿ ಎಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ನೀರಿಗೆ ತತ್ವಾರವಿದ್ದು, ವೆಂಟೆಂಡ್ ಡ್ಯಾಮ್ ನಿರ್ಮಾಣದ ಮೂಲಕ ಈ ಸಮಸ್ಯೆ ನೀಗಿಸಲಾಗಿದೆ. ಸೌಕೂರು ಏತ ನೀರಾವರಿ ಕಾಮಗಾರಿ ಮೂಲಕ ಗುಲ್ವಾಡಿ ಸಹಿತ 7 ಗ್ರಾಮಗಳಿಗೆ ನೀರುಣಿಸುವ ಕಾರ್ಯವಾಗುತ್ತಿದೆ. ಪ್ರತಿ ಮನೆಗಳಿಗೆ ಕುಡಿಯುವ ನೀರು ನೀಡುವ ಮಹತ್ವದ ಕಾರ್ಯಕ್ಕೆ ನ.26ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದ್ದಾರೆ.

ನೇರಳಕಟ್ಟೆಯ ಶ್ರೀಜಲ ಟವರ್ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದ ಕರ್ಕುಂಜೆ ಗ್ರಾ.ಪಂ ವ್ಯಾಪ್ತಿಯ ಸಾರ್ವಜನಿಕರ ಸಂಪರ್ಕ ಸಭೆ ಹಾಗೂ ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ಕುಂಜೆ ಗ್ರಾಮಕ್ಕೆ 18 ಕೋಟಿ 84 ಲಕ್ಷ ರೂ. ಅನುದಾನ ಬಂದಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಾಗಿವೆ.

ಈಗಾಗಾಲೇ ಗ್ರಾಮಕ್ಕೆ ವಸತಿ ಯೋಜನೆಯಡಿ 30 ಮನೆಗಳು ಮಂಜೂರಾಗಿದ್ದು, 30 ಹೆಚ್ಚುವರಿ ಮನೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಬೆಳಕು ಯೋಜನೆಯಡಿ ಮನೆಗೆ ವಿದ್ಯುತ್ ನೀಡುವ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆ ಎಂದರು. 94ಸಿ, ಅಕ್ರಮ ಸಕ್ರಮ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಶ್ರಮ ವಹಿಸಲಾಗುತ್ತದೆ. ನೆಂಪುವಿನಿಂದ ಶಂಕರನಾರಾಯಣ ಸಂಪರ್ಕಕ್ಕೆ 25 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ.ನೇರಳಕಟ್ಟೆಯಲ್ಲಿ ಸುಸಜ್ಜಿತ ಸರ್ಕಲ್ ಬೇಡಿಕೆಯಿದ್ದು ರಸ್ತೆ ಅಗಲೀಕರಣ ಹಾಗೂ ಸರ್ಕಲ್ ನಿರ್ಮಾಣಕ್ಕೆ 4ಕೋಟಿ ರೂಪಾಯಿ ವೆಚ್ಚದ ಅಂದಾಜು ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.

ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕರು ಇಲ್ಲಿನ 5 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿರುವುದು ಹಾಗೂ ಮಕ್ಕಳಿಗೆ ಉತ್ತಮ ಸೌಕರ್ಯ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಡಿತರಕ್ಕಾಗಿ ಜನರು ಕಾಯುವುದನ್ನು ತಪ್ಪಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ವೋಲ್ವೇಜ್ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಸಂಬಂಧಪಟ್ಟ ಸಚಿವರಿಗೆ ಮನವಿ ನೀಡಿದ್ದು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಕರ್ಕುಂಜೆ ಗ್ರಾಪಂ ಅಧ್ಯಕ್ಷೆ ಶ್ರೀಮತಿ, ಉಪಾಧ್ಯಕ್ಷ ಸಂತೋಷ್‌ ಪೂಜಾರಿ, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಸಮಾಜ ಕಲ್ಯಾಣ ಇಲಾಖೆಯ ರಾಘವೇಂದ್ರ ವರ್ಣೇಕರ್, ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ವಾರಾಹಿ ಇಂಜಿನಿಯರ್ ಪ್ರಸನ್ನ, ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದುರ್ಗಾದಾಸ್, ಗ್ರಾಮಾಂತರ ಠಾಣೆ ಪಿಎಸ್‌ಐ ಪವನ್ ಕುಮಾರ್ ಸಹಿತ ವಿವಿಧ ಇಲಾಖಾಧಿಕಾರಿಗಳಿದ್ದರು. ಕಂದಾಯ ಅಧಿಕಾರಿ ರಾಘವೇಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Edited By : PublicNext Desk
Kshetra Samachara

Kshetra Samachara

03/10/2022 09:58 pm

Cinque Terre

3.37 K

Cinque Terre

1

ಸಂಬಂಧಿತ ಸುದ್ದಿ