ಸುರತ್ಕಲ್: ಸುರತ್ಕಲ್ ಸಮೀಪದ ಎಂ,ಅರ್,ಪಿ,ಎಲ್ ಸಂಸ್ಥೆಯಲ್ಲಿ ಹಲವಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ( ಜನಸೇವಾ ಟ್ರಸ್ಟ್ ರಚನೆ ) ಮತ್ತು ಆರೋಗ್ಯ ಭದ್ರತೆ ಒದಗಿಸುವ ಬಗ್ಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರಿಗೆ ಸರಕಾದ ಮೇಲೆ ಒತ್ತಡ ತರಲು ಎಂ,ಅರ್,ಪಿ,ಎಲ್ ಕರ್ಮಚಾರಿ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು ನಿಯೋಗದಲ್ಲಿ ಎಂ,ಅರ್,ಪಿ,ಎಲ್ ಕರ್ಮಚಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್,ಪ್ರಧಾನ ಕಾರ್ಯ ದರ್ಶಿ ಪ್ರಸಾದ್ ಅಂಚನ್,ಎಸ್ ಸಿ ವಿಭಾಗದ ಅಧ್ಯಕ್ಷ ಸಂತೋಷ, ಚೇಳೈರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಸುನೀಲ್ ಬೋಳ ಮುಂತಾದವರು ಉಪಸ್ಥಿತರಿದ್ದರು.
Kshetra Samachara
07/09/2021 11:48 am