ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಬಜಪೆ ವಿಮಾನ ನಿಲ್ದಾಣ ಟ್ಯಾಕ್ಸಿ ಪಾರ್ಕಿಂಗ್ ಶುಲ್ಕ ಸಮಸ್ಯೆ - ಶಾಸಕ ರಘುಪತಿ ಭಟ್ ಸಭೆ

ಮಂಗಳೂರು: ಬಜಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಬರುವ ಟ್ಯಾಕ್ಸಿಗಳಿಗೆ ಪಾರ್ಕಿಂಗ್ ಶುಲ್ಕವನ್ನು ವಿಧಿಸಲಾಗುತ್ತಿದ್ದು, ವಿಮಾನ ಆಗಮಿಸುವ ಸಮಯದಲ್ಲಿ ವ್ಯತ್ಯಾಸವಾಗಿ ಪ್ರಯಾಣಿಕರು ಬರುವುದು ತಡವಾಗಿ 30 ನಿಮಿಷಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡಲ್ಲಿ ರೂ.150 ಪಾವತಿಸಬೇಕಾಗುತ್ತದೆ. ಇದರಿಂದ ಟ್ಯಾಕ್ಸಿಗಳಿಗೆ ಹೆಚ್ಚಿನ ಹೊರೆಯಾಗುತ್ತಿದ್ದು, ಇದನ್ನು ಸರಿಪಡಿಸುವಂತೆ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷರು, ಶಾಸಕ ಕೆ. ರಘುಪತಿ ಭಟ್ ಏರ್ ಪೋರ್ಟ್ ಚೀಫ್ ಆಫೀಸರ್ ಅಶಿತೋಷ್ ಚಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭ ಏರ್ ಪೋರ್ಟ್ ಚೀಫ್ ಆಫೀಸರ್ ಅಶಿತೋಷ್ ಚಂದ್ರ ಮಾತನಾಡಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ದಕ್ಷಿಣ ಕನ್ನಡ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪಿ. ಆನಂದ್, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕೋಟ್ಯಾನ್, ಕೋಶಾಧಿಕಾರಿಗಳಾದ ಪ್ರಕಾಶ್ ಅಡಿಗ, ಸದಸ್ಯರಾದ ಕೃಷ್ಣ ಪೂಜಾರಿ, ರತೀಶ್ ಶೆಟ್ಟಿ, ಶ್ರೀನಾಥ್ ಹಾಗೂ ನಿಯೋಗ ದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/10/2021 07:42 am

Cinque Terre

1.37 K

Cinque Terre

0

ಸಂಬಂಧಿತ ಸುದ್ದಿ