ಮುಲ್ಕಿ; ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಪ್ರಯುಕ್ತ ಯುವಕ ಮಂಡಲ ಶಿಮಂತೂರು ಹಾಗೂ ಮಹಿಳಾ ಮಂಡಳಿ ವತಿಯಿಂದ ಮುಲ್ಕಿ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗಿನ ಆವರಣದ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಿಮಂತೂರು ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ ಮಾತನಾಡಿ ಸ್ವಚ್ಛತೆಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಯುವಕ ಮಂಡಲದಿಂದ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಈ ಸಂದರ್ಭ ಶಿಮಂತೂರು ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.
Kshetra Samachara
02/10/2021 01:29 pm