ಮುಲ್ಕಿ: ನವರಾತ್ರಿಯ ಶುಭ ಸಂದರ್ಭದಲ್ಲಿ ನವರಾತ್ರಿಯ ಮೊದಲ ದಿನ ದೇವಸ್ಥಾನಗಳಲ್ಲಿ ಹೇಗೆ ವಿಜೃಂಭಣೆಯಿಂದ ಪೂಜಾಕಾರ್ಯವನ್ನು ಆರಂಭಿಸುತ್ತಾರೋ ಹಾಗೆಯೇ ಕಿನ್ನಿಗೋಳಿಯ ಯುಗಪುರುಷ ಪ್ರಕಟಣಾಲಯ ಕೃತಿ ಬಿಡುಗಡೆಯಂತಹ ಸಾಹಿತ್ಯ ಸೇವೆಯನ್ನು ನವರಾತ್ರಿಯ ಮೊದಲ ದಿನ ಜರಗಿಸಿದುದು ಅಭಿನಂದನಾರ್ಹ ಎಂದು ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಪ್ರಸಂಗಕರ್ತ ಶ್ರೀಧರ ಡಿ.ಎಸ್.ರವರು ಹೇಳಿದರು.
ಅವರು ಯುಗಪುರುಷ ಸಭಾಭವನದಲ್ಲಿ ಅಮೃತ ಮಹೋತ್ಸವದಲ್ಲಿರುವ, 500ಕ್ಕೂ ಮಿಕ್ಕಿ ಕೃತಿಗಳನ್ನು ಸಾರಸ್ವತಲೋಕಕ್ಕೆ ಅರ್ಪಿಸಿರುವ ಕಿನ್ನಿಗೋಳಿ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಶ್ರೀ ಎಂ.ಎಂ.ಪೈ ರಚಿತ "ಜೀವನ ರಹಸ್ಯ" ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು ಮಾತನಾಡಿ ಯುಗಪುರುಷ ಉದಯೋನ್ಮುಖ ಬರಹಗಾರರಿಗೆ ಉತ್ತೇಜನ ನೀಡುತ್ತಾ ಬಂದಿದೆ. ಈ ಕಾರ್ಯ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರದೀಪಕುಮಾರ ಕಲ್ಕೂರ, ವರ್ಧಮಾನ ಪ್ರಶಸ್ತಿ ಪುರಸ್ಕೃತ ಸಾಹಿತಿ ಉದಯಕುಮಾರ ಹಬ್ಬು, ಹೊಸ ಅಂಗಣ ಪತ್ರಿಕೆಯ ಸಂಪಾದಕ ಡಾ| ಹರಿಶ್ಚಂದ್ರ ಪಿ. ಸಾಲ್ಯಾನ್ ಮುಲ್ಕಿ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/10/2021 10:46 am