ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ :ಚಿತ್ರಾಪುರ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ನಿಧಿ ಸಂಚಯನ ಕಾರ್ಯಕ್ರಮಕ್ಕೆ ಚಾಲನೆ

ಸುರತ್ಕಲ್ : ಸುರತ್ಕಲ್ ಸಮೀಪದ ಚಿತ್ರಾಪುರ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠ ದಲ್ಲಿ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮ ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ,ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ನಿಧಿ ಸಂಚಯನಕ್ಕೆ ಮುಷ್ಠಿ ಕಾಣಿಕೆ ಸಮರ್ಪಿಸುವ ಮೂಲಕ ಶುಭಾರಂಭಗೊಳಿಸಿದರು.

ಪ್ರಮುಖರಾದ ಉಮೇಶ್ ಟಿ. ಕರ್ಕೇರ, ಕೇಶವ ಸಾಲ್ಯಾನ್, ಸ್ಥಳೀಯ ಪಾಲಿಕೆಯ ಸದಸ್ಯರುಗಳು, ಸಮಿತಿ ಪದಾಕಾರಿಗಳು, ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

16/10/2021 01:56 pm

Cinque Terre

748

Cinque Terre

0

ಸಂಬಂಧಿತ ಸುದ್ದಿ