ದೇರೆಬೈಲ್:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಕುದ್ಮುಲ್ ರಂಗರಾವ್ ನಗರದ ರಸ್ತೆ ಮತ್ತು ತಡೆಗೋಡೆ ರಚನೆ ಕಾಮಗಾರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮನೋಜ್ ಕುಮಾರ್, ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಪಕ್ಷದ ಮುಖಂಡರು, ಗಣ್ಯರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
25/10/2021 03:34 pm