ಕೈಕಂಬ : ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ರೂ 13.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು.
ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹಾಗೂ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರು ಯಾವುದೇ ಉದ್ಘಾಟನೆ ಕಾರ್ಯಕ್ರಮ ಮಾಡದೇ ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಕಾಮಗಾರಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಬೊಳ್ಳಾಜೆ, ಗಂಜಿಮಠ ಗ್ರಾ.ಪಂ.ಅಧ್ಯಕ್ಷ ನೋಣಯ್ಯ ಕೋಟ್ಯಾನ್, ತೆಂಕ ಎಡಪದವು ಗ್ರಾ.ಪಂ.ಅಧ್ಯಕ್ಷ ಸುಕುಮಾರ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ ಸ್ಥಳೀಯ ನಾಗರಿಕರಿಗೆ ಮತ್ತು ಶಾಲಾ ಮಕ್ಕಳಿಗೆ ಇನ್ನು ಮುಂದೆ ಮಂಗಳೂರಿನಿಂದ ಬಂಟ್ವಾಳಕ್ಕೆ ಹೋಗಿಬರಲು ಸುತ್ತಿ ಬಳಸಿ ಸಂಚರಿಸುವ ಅನಿವಾರ್ಯತೆ ಇಲ್ಲ. ಜನರ ಹಣ, ಸಮಯ ಮತ್ತು ಶ್ರಮ ಇನ್ನು ಮುಂದೆ ಉಳಿತಾಯವಾಗುತ್ತದೆ ಎಂದರು.
Kshetra Samachara
12/11/2021 04:25 pm