ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಕಲ್ಲಾಪು ಬಳಿ ಪರಂಬೋಕು ತೋಡಿನ ಕಿಂಡಿ ಅಣೆಕಟ್ಟುವಿಗೆ ಹಲಗೆಗಳನ್ನು ಅಳವಡಿಸಲಾಯಿತು.
ಪಡುಪಣಂಬೂರು ಗ್ರಾ ಪಂ ಕಾರ್ಯದರ್ಶಿ ಲೋಕನಾಥ ಭಂಡಾರಿ ಮಾತನಾಡಿ, ಕಿಂಡಿ ಅಣೆಕಟ್ಟುವಿಗೆ ಹಲಗೆ ಹಾಕುವುದರ ಮೂಲಕ ಅಂತರ್ಜಲ ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.
ಕ್ಲಬ್ ನ ಅದ್ಯಕ್ಷರಾದ ಸಂತೋಷ್ ದೇವಾಡಿಗ, ಪಡುಪಣಂಬೂರು ಗ್ರಾಪಂ ಉಪಾಧ್ಯಕ್ಷೆ ಕುಸುಮ ಕ್ಲಬ್ ನ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.
Kshetra Samachara
09/01/2022 03:44 pm