ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಪಂಚಾಯಿತಿ ವ್ಯಾಪ್ತಿಯ ನರೇಗಾ ಚಟುವಟಿಕೆಗಳ ಪಾರದರ್ಶಕತೆ ನಿರ್ವಹಣೆಯ ಕೆಲಸ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆಯಿಂದ ಆಗುತ್ತಿದ್ದು ಗ್ರಾಮಸ್ಥರು ಹೆಚ್ಚಿನ ಪ್ರಯೋಜನ ಪಡೆಯಬೇಕು ಎಂದರು. ಕಳೆದ ವರ್ಷದಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ಕಾಮಗಾರಿ ನಡೆದಿದ್ದು ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ಮತ್ತಷ್ಟು ಪ್ರೋತ್ಸಾಹ ನೀಡಲಾಗುವುದು ಎಂದರು.
ತಾಲೂಕು ಸಂಯೋಜಕಿ ಧನಲಕ್ಷ್ಮಿ ಉದ್ಯೋಗ ಖಾತರಿ ಯೋಜನೆಯ ಬಗ್ಗ ಮಾಹಿತಿ ನೀಡಿದರು.ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಜಯಕುಮಾರ್, ಇಂಜಿನಿಯರ್ ಅರವಿಂದ, ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಕಾರ್ಯದರ್ಶಿ ಯೋಗೀಶ್ ನಾನಿಲ್, ಪಂಚಾಯತ್ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
01/02/2022 01:17 pm