ಮುಲ್ಕಿ:ಕಿಲ್ಪಾಡಿ ಗ್ರಾಮ ಪಂಚಾಯತ್ ನ ತ್ರೈಮಾಸಿಕ ಕೆ.ಡಿ.ಪಿ.ಸಭೆ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆಯಲ್ಲಿ ನಡೆಯಿತು
ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ್ ಪಡಂಗ ಮಾತನಾಡಿ ವಿವಿಧ ಇಲಾಖೆಯ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಅಕ್ರೋಶ ವ್ಯಕ್ತಪಡಿಸಿ ಮೂರು ತಿಂಗಳ ಅಭಿವೃದ್ಧಿ ಅವಲೋಕನ, ಮುಂದಿನ ಅಭಿವೃದ್ಧಿ ಬಗ್ಗೆ ಚರ್ಚಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯ ಹಾಜರಾದಾಗ ಗ್ರಾಮ ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಆಗಮಿಸಿದ ಕೆಲ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ತ್ರೈಮಾಸಿಕ ವರದಿ ನೀಡಿದರು. ಪ್ರಭಾರ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜ, ಕೃಷಿ ಅಧಿಕಾರಿ ಬಶೀರ್, ಪಶುಸಂಗೋಪನಾ ಅಧಿಕಾರಿ ಸಂಪತ್ ಕುಮಾರ್,ಸಮಾಜ ಕಲ್ಯಾಣ ಅಧಿಕಾರಿ ನಿಂಗರಾಜು, ಕಿರಿಯ ಆರೋಗ್ಯ ಸಹಾಯಕಿ ಸುಮ, ಸಹಾಯಕ ಇಂಜಿನಿಯರ್ ಮೆಸ್ಕಾಂ ನ ವಿವೇಕಾನಂದ ಶೆಣೈ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರಪುಲ್ಲ ಮತ್ತು ಶ ಜಯಂತಿ ಮುಂತಾದವರು ಉಪಸ್ಥಿತರಿದ್ದರು.
Kshetra Samachara
09/03/2022 07:57 am