ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಕ್ಯಾನ್ಸರ್ ಬಗ್ಗೆ ಭಯ ಬೇಡ, ಜಾಗೃತಿ ಇರಲಿ; ಡಾ. ಭಾಸ್ಕರ ಕೋಟ್ಯಾನ್

ಮುಲ್ಕಿ: ಬಾಯಿ, ಸ್ತನ ಮತ್ತು ಗರ್ಭಕೋಶದ ಕಾಯಿಲೆ ಜನಸಮುದಾಯವನ್ನು ತೀವ್ರವಾಗಿ ಕಾಡುತ್ತಿದ್ದು, ಲಕ್ಷಕ್ಕೂ ಮೀರಿ ಜನರು ಈ ಕಾಯಿಲೆಯಿಂದ ಸಾವಿಗೀಡಾಗುತ್ತಿದ್ದಾರೆ. ನಾವು ನಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಂಡು ಆರಂಭಿಕ ಹಂತದಲ್ಲಿಯೇ ಅದನ್ನು ಪತ್ತೆಹಚ್ಚಿದರೆ ಗುಣಪಡಿಸಲು ಸಾಧ್ಯವಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯ ಎಂದು ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾಸ್ಕರ್ ಕೋಟ್ಯಾನ್ ಹೇಳಿದ್ದಾರೆ.

ಕಟೀಲು ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯೂತ್ ರೆಡ್‌ಕ್ರಾಸ್ ಘಟಕ, ರಕ್ಷಕ-ಶಿಕ್ಷಕ ಸಂಘ ಹಾಗೂ ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಮತ್ತು ಮಂಗಳೂರಿನ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಜರಗಿದ ಬಾಯಿ ಮತ್ತು ಸ್ತನ ಕ್ಯಾನ್ಸರ್ ಜಾಗೃತಿಯ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಂಗಳೂರಿನ ಯೆನಪೋಯ ವಿಶ್ವವಿದ್ಯಾನಿಲಯದ ಡಾ.ಇಮ್ರಾನ್ ಪಾಷಾ, ವೈದ್ಯೆ ಡಾ.ಅಶ್ವಿನಿ ಶೆಟ್ಟಿ, ಕಟೀಲು ದೇವಳದ ಅನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ, ಕಾಲೇಜಿನ ಪ್ರಾಚಾರ್ಯ ಡಾ.ಕೃಷ್ಣ, ಬಿಪಿನ್ ಚಂದ್ರ ಶೆಟ್ಟಿ, ಕೊಡೆತ್ತೂರುಗುತ್ತು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಾತ ಭಟ್, ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಜಗನ್ನಾಥ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/03/2022 05:40 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ