ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಭತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಅರ್ಚಕ ಶ್ರೀಪತಿ ಪಾಧ್ಯಾಯ ಹಾಗೂ ತಂತ್ರಿಗಳ ನೇತೃತ್ವದಲ್ಲಿ ಕೆರೆದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉತ್ಸವ ಬಲಿ ನಡೆದು ಕೆರೆದೀಪೋತ್ಸವ ನಡೆಯಿತು.
ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿ ಪುನೀತರಾದರು.
ಈ ಸಂದರ್ಭ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ನಾಗೇಶ್ ಬಪ್ಪನಾಡು, ವೆಂಕಟೇಶ್ ಹೆಬ್ಬಾರ್, ಚಂದ್ರಶೇಖರ್ ಸುವರ್ಣ, ಶಿಮಂತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು
Kshetra Samachara
22/03/2022 09:54 pm