ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಬಪ್ಪನಾಡು ಕ್ಷೇತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

ಮುಲ್ಕಿ: ಮುಲ್ಕಿ ಸೀಮೆ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ದೇವಸ್ಥಾನದ ವತಿಯಿಂದ ಜಿಲ್ಲಾಧಿಕಾರಿಗಳನ್ನು ಗೌರವಿಸಿದರು

ಈ ಸಂದರ್ಭ ಅವರು ಬಪ್ಪನಾಡಿನ ಇತಿಹಾಸವಿರುವ ಬಪ್ಪನಾಡು ಡೋಲು ಬಾರಿಸಿ ದೇವಸ್ಥಾನದ ಆಡಳಿತ ಅಭಿವೃದ್ಧಿಯ ಬಗ್ಗೆ ವ್ಯಕ್ತಪಡಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ದೇವಪ್ರಸಾದ್ ಪುನರೂರು, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/03/2022 08:13 pm

Cinque Terre

5.74 K

Cinque Terre

0

ಸಂಬಂಧಿತ ಸುದ್ದಿ