ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದವಿನಂಗಡಿ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

ಪದವಿನಂಗಡಿ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ‌ ವ್ಯಾಪ್ತಿಯ *ಪಚ್ಚನಾಡಿ ವಾರ್ಡ್ ನ ವ್ಯಾಪ್ತಿಯಲ್ಲಿ ಸುಮಾರು 200 ಲಕ್ಷ ವೆಚ್ಚದಲ್ಲಿ ಪದವಿನಂಗಡಿ ಜಂಕ್ಷನ್ ಬಳಿಯ ಕ್ಯಾಶ್ಯೂ ಫ್ಯಾಕ್ಟರಿ ಬಳಿಯಿಂದ ಗಂಧಕಾಡು ಸಂಪರ್ಕಿಸುವ ಮುಖ್ಯ ರಸ್ತೆ ಕಾಂಕ್ರೀಟಿಕರಣ ಮತ್ತು *ಪಚ್ಚನಾಡಿ ವಾರ್ಡ್ ನ ಪದವಿನಂಗಡಿಯಲ್ಲಿ ಮಹಾಲಸಾ ನಾರಾಯಣಿ ದೇವಸ್ಥಾನದಿಂದ ಮೇರಿಹಿಲ್ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಕಾಂಕ್ರೀಟಿಕರಣ* ಮಾಡುವ ಯೋಜನೆಗೆ *ಶಾಸಕರಾದ ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಸ್ಥಳೀಯ ಕಾರ್ಪೊರೇಟರ್ ಸಂಗೀತಾ ಆರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೊಂದೆಲ್, ಜಿಲ್ಲಾ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ರಾಮ ಮುಗ್ರೋಡಿ ಮತ್ತಿತರರು ಸಾಥ್ ನೀಡಿದರು. ಬೂತ್ ಅಧ್ಯಕ್ಷರು ಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯ ನಾಗರೀಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/03/2022 02:01 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ