ಮುಲ್ಕಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಕಾರ್ಯಕ್ರಮ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಾರ್ಮಿಕರ ಹಿತ ರಕ್ಷಣೆಗೆ ಸರಕಾರ ಬದ್ಧವಾಗಿದ್ದು ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ವಿನಂತಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ಶಶಿ ಸುರೇಶ್ ಹಾಗೂ ರೇವತಿ ಶೆಟ್ಟಿಗಾರ್ ಉಪಸ್ಥಿತರಿದ್ದರು. ಪಂಚಾಯತ್ ಕಾರ್ಯದರ್ಶಿ ಹರಿಶ್ಚಂದ್ರ ಸ್ವಾಗತಿಸಿ ವಂದಿಸಿದರು.
Kshetra Samachara
07/05/2022 10:08 pm