ಮಂಗಳೂರು: ನಗರ ಉತ್ತರ ಕ್ಷೇತ್ರದ ಚಿತ್ರಾಪುರ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಶುಕ್ರವಾರ ಪಾದುಕಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಪಾಲ್ಗೊಂಡರು*ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಖ್ಯಮಂತ್ರಿಗಳಲ್ಲಿ ಚರ್ಚಿಸಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಸಹಕಾರದಲ್ಲಿ ಹೆಚ್ಚುವರಿಯಾಗಿ 2 ಕೋಟಿ ರೂ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸುವುದಾಗಿ ಶಾಸಕರು ಹೇಳಿದರು.
ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರ ಇವರ ಆಶೀರ್ವಾದದೊಂದಿಗೆ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳು ಮಾರ್ಗದರ್ಶನ ಮತ್ತು ವಾಸ್ತು ತಜ್ಞ ಕುಡುಪು ಶ್ರೀ ಕೃಷ್ಣರಾಜ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನ ನೆರವೇರಿದ ಬಳಿಕ ಶಾಸಕರನ್ನು ದೇವಳದ, ಜೀರ್ಣೋದ್ಧಾರ ಸಮಿತಿ ವತಿಯಿಂದ ಸಮ್ಮಾನಿಸಲಾಯಿತು. ಕಲ್ಯಾವಿ ವೆಂಕಟ್ರಾಪ್ ಮತ್ತು ಕುಟುಂಬಸ್ಥರ ಪರವಾಗಿ ಕಲ್ಬಾವಿ ರಮೇಶ್ ರಾವ್, ಶಶಿಕಲಾ ಗಿರೀಶ್ ಶ್ರೀಯಾನ್, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
13/05/2022 03:10 pm