ಮಂಗಳೂರು: ನಗರದ ಹೊರವಲಯದ ಬೈಕಂಪಾಡಿಯಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣ ಹಂತದಲ್ಲಿದೆ. ವಾಮಾಂಜೂರಿನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಕಟ್ಟಡ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.
ಅದರೊಂದಿಗೆ ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಕೂಡ 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ರಾಜ್ಯ ಸರಕಾರ ಪೊಲೀಸ್ ವ್ಯವಸ್ಥೆಗೆ ಹಾಗೂ ನಾಗರಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಬದ್ಧವಾಗಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು.
ಅವರು ವಾಮಾಂಜೂರಿನಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸುಮಾರು 2 ಕೋಟಿ ರೂ ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಡಿ.ಸಿ.ಪಿ ಅನ್ಶು ಕುಮಾರ್,ಸ್ಥಳೀಯ ಕಾರ್ಪೋರೇಟರ್ ಹೇಮಲತಾ ರಘು ಸಾಲಿಯಾನ್, ಭಾಸ್ಕರ್ ಮೊಯ್ಲಿ, ಜಿಲ್ಲಾ ವಕ್ತಾರರಾದ ಜಗದೀಶ ಶೇಣವ, ಮಂಡಲ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಅನಿಲ್ ಕುಮಾರ್ ರೈ, ಅಶೋಕ್, ಲಕ್ಷ್ಮಣ್ ಶೆಟ್ಟಿಗಾರ್, ಪೊಲೀಸ್ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
06/07/2022 03:51 pm