ಸುರತ್ಕಲ್ : ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿ ಪ್ರದೇಶದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿವೈ ಚಾಲನೆ ನೀಡಿದರು. ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಸುರತ್ಕಲ್ ಬೀಚಿನಲ್ಲಿ ರಾಷ್ಟ್ರೀಯತೆಯನ್ನು ಬಿಂಬಿಸುವ ಬೃಹತ್ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ದೇಶಭಕ್ತಿಯ ಸಂಕೇತವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕರು ಹೇಳಿದರು. ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳ ರಾವ್, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಗಣ್ಯರು ಉಪಸ್ಥಿತರಿದ್ದರು.
Kshetra Samachara
11/08/2022 07:26 am