ಮುಲ್ಕಿ: ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಮುಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಸಾಧಕರಿಗೆ ಗೌರವ ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಸಾಮಾಜಿಕ ಹಾಗೂ ರಕ್ಷಣಾ ಕ್ಷೇತ್ರದ ಸಾಧಕ ಗಿರೀಶ್ ಮೆಂಡನ್ ಒಡೆಯರ ಬೆಟ್ಟು ರವರನ್ನು ಸನ್ಮಾನಿಸಲಾಯಿತು. ಹೊಸ ಅಂಗಣ ಮಾಸ ಪತ್ರಿಕೆಯ ಮಾಸಿಕ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.ಮುಖ್ಯ ಅತಿಥಿಗಳಾಗಿ ಮುಲ್ಕಿ ಅಭಿವೃದ್ಧಿ ನಾಗರಿಕ ಸಮಿತಿ ಅಧ್ಯಕ್ಷ ಹರೀಶ್ ಪುತ್ರನ್ ಮಾತನಾಡಿ ಮುಲ್ಕಿಯಲ್ಲಿ ಪ್ರಸಿದ್ಧ ಯಾತ್ರಾ ಸ್ಥಳಗಳು, ವಿದ್ಯಾಸಂಸ್ಥೆಗಳು ಇದ್ದು ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ ಎಂದರು.
ವೇದಿಕೆಯಲ್ಲಿ ವೈದ್ಯರಾದ ಡಾ. ಅಚ್ಯುತ್ ಕುಡ್ವ,ಮೂಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಶಿವರಾಮ ಸುವರ್ಣ, ಮಾಜೀ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ರಾಘು ಸುವರ್ಣ, ವಾಸು ಪೂಜಾರಿ ಚಿತ್ರಾಪು, ಮತ್ತಿತರರು ಉಪಸ್ತಿತರಿದ್ದರು.ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ ಡಾ| ಹರೀಶ್ಚಂದ್ರ ಪಿ ಸಾಲ್ಯಾನ್ ಸ್ವಾಗತಿಸಿದರು, ವಾಮನ್ ಕೋಟ್ಯಾನ್ ನಡಿಕುದ್ರು ಧನ್ಯವಾದ ಅರ್ಪಿಸಿದರು. ರವಿಚಂದ್ರ ನಿರೂಪಿಸಿದರು.
Kshetra Samachara
01/08/2021 11:44 am