ಉಡುಪಿ: ಸುಮಾರು 40 ವರ್ಷಗಳ ಕಾಲ ನಿಟ್ಟೂರು ಪ್ರೌಢಶಾಲೆಯಲ್ಲಿ ಗ್ರಂಥಪಾಲಕಿ ಹಾಗೂ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀಮತಿ ಮನೋರಮಾ ಇವರ ಬೀಳ್ಕೊಡುಗೆ ಸಮಾರಂಭ ಇಂದು ನಡೆಯಿತು. ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಿಟ್ಟೂರು ಪ್ರೌಢ ಶಾಲೆಯ ರಜತ ಸಭಾಭವನದಲ್ಲಿ ಜರಗಿತು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾ ವೇಣುಗೋಪಾಲ ಆಚಾರ್ಯ, ಎಸ್.ವಿ.ಭಟ್, ಭಾಸ್ಕರ್ ಡಿ.ಸುವರ್ಣ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ, ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್, ಮುಖ್ಯೋಪಾಧ್ಯಾಯರಾದ ಅನಸೂಯ ಹಾಗೂ ನಿಟ್ಟೂರು ಎಜುಕೇಷನಲ್ ಸೊಸೈಟಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ನಿವೃತ್ತ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
Kshetra Samachara
03/08/2021 04:38 pm