ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪತ್ರಕರ್ತರ ನಿವೇಶನಕ್ಕೆ ಜಾಗ ಕಾಯ್ದಿರಿಕೆ

ಮಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಪತ್ರಕರ್ತರಿಗೆ ಈಗಾಗಲೇ ನಿವೇಶನ ದೊರೆತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಮಂಗಳೂರು ತಾಲೂಕಿನಲ್ಲಿ ಜಾಗ ಕಾಯ್ದಿರಿಸಲಾಗಿದ್ದು, ಕಡತವನ್ನು ಶೀಘ್ರದಲ್ಲೇ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

ಪತ್ರಕರ್ತರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮವನ್ನು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಲವು ಸಮಯದಿಂದ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲೆಯ ಶಾಸಕರುಗಳ ಮುಖೇನ ಈಗಾಗಲೇ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿವೇಶನಕ್ಕೆ ಮನವಿ ಸಲ್ಲಿಸಿದ್ದು, ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಕೂಡಲೇ ನಿವೇಶನಕ್ಕೆ ಜಾಗ ಗುರುತಿಸಿ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಸೂಚನೆ ಮೇರೆಗೆ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 3.88ಎಕರೆ ಜಾಗವನ್ನು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಪ್ರಾಮಾಣಿಕರು. ಇವರಲ್ಲಿ ತುಂಬಾ ಮಂದಿಗೆ ನಿವೇಶನವಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದೆ. ಆದಷ್ಟು ಬೇಗದಲ್ಲೇ ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ನೀಡಬೇಕೆಂದು ನಮ್ಮ ಅಭಿಲಾಷೆಯೂ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷೃ ಆರ್. ರಾಮಕಷ್ಣ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/08/2021 07:09 am

Cinque Terre

2.78 K

Cinque Terre

0