ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ: ಸ್ವಚ್ಛತೆ ಮೂಲಕ ಪಂಚಾಯತ ಅಭಿವೃದ್ಧಿಗೆ ಸಹಕರಿಸಿ: ಗೋಪಿನಾಥ ಪಡಂಗ

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು ವ್ಯಾಪ್ತಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ನ 2020 21ನೇ ಸಾಲಿನ ವಾರ್ಷಿಕ ಜಮಾಬಂದಿ ಕಿಲ್ಪಾಡಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು. ಸಭೆಯಲ್ಲಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಿ. ಸದ್ಯದಲ್ಲಿ ಪಂಚಾಯತ್ ಗೆ ನೂತನ ಕಟ್ಟಡ ನಿರ್ಮಾಣದ ಯೋಜನೆ ಇದ್ದು ಶಾಸಕರ, ಅಧಿಕಾರಿಗಳ ಹಾಗೂ ಗ್ರಾಮಸ್ಥರ ಸಹಕಾರ ಮುಖ್ಯ ಎಂದರು.

ಸಭೆಯಲ್ಲಿ ಪಂಚಾಯತ್ ಸಿಬ್ಬಂದಿ ರಮೇಶ್ 2020 21ರ ವಾರ್ಷಿಕ ಜಮಾಬಂದಿ ಕಾಮಗಾರಿ ಲೆಕ್ಕ ಮಂಡಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ನೋಡಲ್ ಅಧಿಕಾರಿಯಾಗಿದ್ದರು. ಪಂಚಾಯತ್ ಸದಸ್ಯರಾದ ದಮಯಂತಿ, ಶಾಂತಾ ಲಲಿತ ಯಾದವ್, ಮಮತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ಸಿಬ್ಬಂದಿ ಸುರೇಶ್ ಧನ್ಯವಾದ ಅರ್ಪಿಸಿದರು.

Edited By : PublicNext Desk
Kshetra Samachara

Kshetra Samachara

17/08/2021 02:20 pm

Cinque Terre

5.73 K

Cinque Terre

0

ಸಂಬಂಧಿತ ಸುದ್ದಿ