ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ ಎಕ್ಸಲೆಂಟ್ ಸಿಇಟಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗೆ ಸನ್ಮಾನ

ಮೂಡುಬಿದಿರೆ: ಸಿ.ಇ.ಟಿಯಲ್ಲಿ ರಾಜ್ಯಕ್ಕೆ 7 ಮತ್ತು 8ನೇ ರ‍್ಯಾಂಕ್ ಪಡೆದ ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಜಿ.ಭಟ್ ಅವರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾತ್ವಿಕ್ ಜಿ. ಭಟ್ ನಿರಂತರ ಪರಿಶ್ರಮ, ಶ್ರದ್ಧೆ, ಗುಣಮಟ್ಟದ ಬೋಧಕ ವೃಂದ, ಶಿಸ್ತು ಬದ್ಧ ವ್ಯವಸ್ಥೆ, ಕಲಿಕೆಗೆ ಪೂರಕವಾದ ಪರಿಸರ ಹಾಗೂ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿಯ ಪ್ರೋತ್ಸಾಹದಿಂದ ನಾನು ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ದಿನದಲ್ಲಿ 14 ಗಂಟೆಗಿAತಲೂ ಹೆಚ್ಚಿನ ಸಮಯವನ್ನು ಓದಿಗಾಗಿ ಬಳಸಿಕೊಳ್ಳುತ್ತ ಲಾಕ್‌ಡೌನ್ ಸಂದರ್ಭವನ್ನು ಸದುಪಯೋಗ ಮಾಡಿಕೊಂಡಿದ್ದೇನೆ. ಮುಂದೆ ನೀಟ್ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಗಳಿಸುವ ನಿರೀಕ್ಷೆ ಇದೆ ಎಂದರು.

ಸಂಸ್ಥೆಯ ವತಿಯಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನದೊಂದಿಗೆ 50,000 ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಪೋಷಕರಾದ ಜಯಶ್ರೀ ಮತ್ತು ಪ್ರೊ. ಜಿ.ಆರ್. ಭಟ್ ದಂಪತಿಯನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಉಪನ್ಯಾಸಕರು ಉಪಸ್ಥಿತರಿದ್ದರು.

ಭಾಷಾ ವಿಭಾಗ ಮುಖ್ಯಸ್ಥ ವಿಕ್ರಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

24/09/2021 11:16 am

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ