ಸುರತ್ಕಲ್: 73ನೇ ಗಣರಾಜ್ಯೋತ್ಸವ ಪ್ರಯುಕ್ತ ಸುರತ್ಕಲ್ ಸಮೀಪದ ಚೇಳೈರು ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ವಿಶೇಷ ಮ್ಯಾರಥಾನ್ ಮತ್ತು ಓಟದ ಸ್ಪರ್ಧೆ ನಡೆಯಿತು.ಸ
ಸುರತ್ಕಲ್ ಪೊಲೀಸ್ ಠಾಣೆಯ ಉಪಠಾಣಾಧಿಕಾರಿ ಚಂದ್ರಶೇಖರಯ್ಯ ಮ್ಯಾರಥಾನ್‌ಗೆ ಚಾಲನೆ ನೀಡಿದರು. ಚೇಳೈರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೆಂಕಟೇಶ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಚಂದ್ರನಾಥ, ಪ್ರಾಧ್ಯಾಪಕಿ ಮಮತಾ ಮುಂತಾದವರು ಉಪಸ್ಥಿತರಿದ್ದರು.
Kshetra Samachara
26/01/2022 08:27 am