ಮೂಡುಬಿದಿರೆ : ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ ಮತ್ತು ವಿಜಯವಾಣಿ ಪತ್ರಿಕೆ, ದಿಗ್ವಿಜಯ ವಾಹಿನಿಯ ಸಹಾಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ 'ಮೆಗಾ ಕ್ವಿಜ್- 2022' ಎಂಬ ರಸ ಪ್ರಶ್ನೆ ಸ್ಪರ್ಧೆ ನಡೆಯಿತು.
ಮೆಗಾ ಕ್ವಿಝ್‌ನಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಭಾಗದ 63 ಕಾಲೇಜುಗಳು ಭಾಗವಹಿಸಿದ್ದವು. ಅದರಲ್ಲಿ ಪ್ರಥಮ ಬಹುಮಾನವನ್ನು ಕಾರ್ಕಳದ ಎಂಪಿಎಂ ಪ್ರಥಮ ದರ್ಜೆ ಕಾಲೇಜು ಮುಡಿಗೇರಿಸಿಕೊಂಡರೆ, ದ್ವಿತೀಯ ಬಹುಮಾನವನ್ನು ಪುತ್ತೂರು ವಿವೇಕಾನಂದ ಕಾಲೇಜು ಪಡೆಯಿತು. ತೃತೀಯ ಸ್ಥಾನವನ್ನು ಕೋಟೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಚತುರ್ಥ ಸ್ಥಾನವನ್ನು ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಪಡೆದುಕೊಂಡಿತು. ಸ್ಪರ್ಧೆಯಲ್ಲಿ 4 ಸಮಾಧಾನಕರ ಬಹುಮಾನವನ್ನು ಕ್ರಮವಾಗಿ ಕೆನರಾ ಕಾಲೇಜು ಮಂಗಳೂರು, ತಿಲಕ್ ಕಾಲೇಜ್ ಮಂಗಳೂರು, ಎಂಪಿಯಎ ಕಾಲೇಜು ಕಾರ್ಕಳ, ಆಳ್ವಾಸ್ ಕಾಲೇಜು ಮೂಡುಬಿದಿರೆ ಪಡೆದುಕೊಂಡಿತು.
ಮೂಡುಬಿದಿರೆಯ ನೇತಾಜಿ ಬ್ರಿಗೇಡ್ ಇದರ ಸಂಚಾಲಕರಾದ ರಾಹುಲ್ ಕುಲಾಲ್ ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಉದ್ಘಾಟಿಸಿದರು. ವಿಜಯವಾಣಿ ಪತ್ರಿಕೆಯ ಮಂಗಳೂರು ಬ್ಯುರೋದ ಸ್ಥಾನಿಕ ಸಂಪಾದಕ ಸುರೇಂದ್ರ ವಾಗ್ಲೆ, ಉಪಸಂಪಾದಕ ಮೋಹನದಾಸ್ ಮರಕ್ಕಡ, ಆಟೋಮೇಷನ್ ಕ್ಲಾಡ್ಸ್ ಸೊಲ್ಯೂಶನ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ ರಾಮ, ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಇದ್ದರು.
Kshetra Samachara
20/03/2022 08:28 am