ಮಂಗಳೂರು:ಧರ್ಮಸ್ಥಳದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು ಮತ್ತು ತುಳು ರಂಗಭೂಮಿ ಕಲಾವಿದ, ನಿರ್ದೇಶಕ ದೇವದಾಸ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ಪ್ರಕಟಿಸಿದೆ.
ಶನಿವಾರ ಜರುಗುವ ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಮತ್ತು ಕುಲಾಧಿಪತಿಗಳಾದ ತಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಲಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ ಘಟಿಕೋತ್ಸವದಲ್ಲಿ ಉಪಸ್ಥಿತರಿರುತ್ತಾರೆ. ರಾಜ್ಯಪಾಲರು ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ.
Kshetra Samachara
21/04/2022 05:23 pm