ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಪಂಚಾಯತ್ ರಾಜ್ ದಿವಸ ಆಚರಣೆ; ಸಾಧಕರಿಗೆ ಗೌರವ

ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 'ಪಂಚಾಯತ್ ರಾಜ್ ದಿವಸದ' ಅಂಗವಾಗಿ ನಡೆದ ಗ್ರಾಮ ಸಭೆಯಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಾದ ಹಿಂದಿನ ಮಂಡಲ ಪಂಚಾಯತ್ ನ ಮಾಜಿ ಸದಸ್ಯರಾದ, ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ವಿಜಯಾ ರೈತರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೊಲಕಾಡಿ ಸಂಜೀವ ಎನ್ ಕೋಟ್ಯಾನ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಗುತ್ತಿನಾರ್ ಸುಧಾಕರ ಶೆಟ್ಟಿ ದೆಪ್ಪುಣಿಗುತ್ತು, ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕ ಪುರುಷೋತ್ತಮ ಕೋಟ್ಯಾನ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಾಧರ್ ಶೆಟ್ಟಿ, ಉದ್ಯಮಿ ಜನಾನಂದ ಶೆಟ್ಟಿ ತಿಂಗೊಳೆ, ಸುಧಾಕರ ಪೂಜಾರಿ ಕೊಲಕಾಡಿ, ಪಂಚಾಯತ್ ಸದಸ್ಯರಾದ ಸುಧಾಕರ ಶೆಟ್ಟಿ, ಪದ್ಮಿನಿ ವಿ ಶೆಟ್ಟಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಯೋಗೀಶ್, ಪಂಚಾಯತ್ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/04/2022 04:27 pm

Cinque Terre

1.55 K

Cinque Terre

0