ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂರುಕಾವೇರಿ: ರಸ್ತೆಯಲ್ಲಿ ಮಳೆ ನೀರು, ಪಾದಚಾರಿಗಳ ಪರದಾಟ

ಮುಲ್ಕಿ: ಮೂಡಬಿದ್ರೆ ಮುಲ್ಕಿ ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ಮಳೆ ನೀರು ಸರಿಯಾಗಿ ಹರಿದು ಹೋಗಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದೆ ಹೆದ್ದಾರಿ ಬದಿಯಲ್ಲಿ ನೀರು ನಿಂತು ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ.

ಕಳೆದ ಎರಡು ವರ್ಷಗಳ ಹಿಂದೆ ಮೂರುಕಾವೇರಿಯಿಂದ ಮುಲ್ಕಿ ವರೆಗೆ ರಸ್ತೆ ಅಗಲೀಕರಣ ಮಾಡಿದ್ದು ಸೂಕ್ತವಾದ ಚರಂಡಿ ನಿರ್ಮಾಣ ಮಾಡದೆ ಇರುವುದರಿಂದ ನೀರು ರಸ್ತೆಯಲ್ಲಿ ನಿಂತು ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ಹಾಗೂ ಲೋಕೋಪಯೋಗಿ ಇಂಜಿನಿಯರಿಗೆ ತಿಳಿಸಿದರೂ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಕೂಡಲೇ ಶಾಸಕರು ಎಚ್ಚೆತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಲು ನಾಗರಿಕರು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/05/2022 06:05 pm

Cinque Terre

3.71 K

Cinque Terre

0

ಸಂಬಂಧಿತ ಸುದ್ದಿ