ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಗ್ರಾಮ ವಾಸ್ತವ್ಯದಲ್ಲಿ ಕೆಐಎಡಿಬಿ ಭೂಸ್ವಾಧೀನಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಮುಲ್ಕಿ:ತಾಲ್ಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಮುಲ್ಕಿ ತಾಲೂಕು ವಿವಿಧ ಇಲಾಖೆ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕರ್ನಿರೆ ವಿಷ್ಣುಮೂರ್ತಿ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕೈಗಾರಿಕೆಗಳಿಗೆ ಭೂಸ್ವಾಧೀನ ವಿರೋಧಿಸಿ ಭೂ ಸಂತ್ರಸ್ಥರ ಹೋರಾಟ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸೋಜ,ಬಳ್ಕುಂಜೆ ಗ್ರಾಪಂ ಅಧ್ಯಕ್ಷೆ ಮಮತಾ ಪೂಂಜ, ಮಾಜಿ ಅಧ್ಯಕ್ಷ ದಿನೇಶ್ ಪುತ್ರನ್, ಉಪಾಧ್ಯಕ್ಷ ಆನಂದ , ಚರ್ಚ್ ಉಪಾಧ್ಯಕ್ಷೆ ಫ್ರೀಡಾ ರೊಡ್ರಿಗಸ್ ಮಾತನಾಡಿ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು ಗ್ರಾಮದ ಶೇ.75 ಗ್ರಾಮಸ್ಥರು ಯಾವುದೇ ಕಾರಣಕ್ಕೂ ಕೈಗಾರಿಕೆಗಳಿಗೆ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಲಿಖಿತವಾಗಿ ತಿಳಿಸಿದ್ದಾರೆ.

ಅಧಿಕಾರಿಗಳು ಸಂತ್ರಸ್ತರಿಗೆ ಕಿರುಕುಳ ನೀಡಿ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ಅಧಿಕಾರಿ ಬಿನೊಯ್ ಸಮಜಾಯಿಷಿ ನೀಡಿ ನಿಮ್ಮ ಮನವಿಯನ್ನು ಸರಕಾರಕ್ಕೆ ತಿಳಿಸುತ್ತಿದ್ದೇನೆ ಎಂದು ಸಮಜಾಯಿಸಿ ನೀಡಿದರು. ಈ ಸಂದರ್ಭ ಮುಲ್ಕಿ ತಹಶೀಲ್ದಾರ್ ಗುರುಪ್ರಸಾದ್ ರವರು ಸಂತ್ರಸ್ತರನ್ನು ಸಮಾಧಾನಪಡಿಸಿದರು. ಸ್ಥಳದಲ್ಲಿ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ ಕೆಲವನ್ನು ಸ್ಥಳದಲ್ಲಿ ಬಗೆಹರಿಸಲಾಯಿತು ಹಾಗೂ ಹಕ್ಕು ಪತ್ರ ಹಾಗೂ ಪಿಂಚಣಿಯನ್ನು ವಿತರಿಸಲಾಯಿತು.

ಈ ಸಂದರ್ಭ ಕಟೀಲು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.,ಭಾಸ್ಕರ್, ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ನಿರೀಕ್ಷಕ ದಿನೇಶ್ ಮತ್ತಿತರರು ಇದ್ದರು.

Edited By : PublicNext Desk
Kshetra Samachara

Kshetra Samachara

18/06/2022 05:10 pm

Cinque Terre

3.51 K

Cinque Terre

0

ಸಂಬಂಧಿತ ಸುದ್ದಿ