ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಆಟೋ ಚಾಲಕರು ಊರಿನ ರಾಯಭಾರಿಗಳು: ಹರೀಶ್ ಪೂಂಜಾ

ಬೆಳ್ತಂಗಡಿ: ಇಲ್ಲಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋ ತಂಗುದಾಣವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ 20 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಉರುವಾಲು ಗ್ರಾಮದ ಕುಪ್ಪೆಟ್ಟಿ ನೆಕ್ಕಿಲು ರಸ್ತೆಯನ್ನು ಉದ್ಘಾಟಿಸಿದರು.

ಆ ಬಳಿಕ ಕುಪ್ಪಟ್ಟಿಯಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಆಟೋ ಚಾಲಕರು ಊರಿನ ರಾಯಭಾರಿಗಳಾಗಿದ್ದು ಜನರ ಒಡನಾಟದೊಂದಿಗೆ ಸೇವೆ ನೀಡುತ್ತಿರುವ ಮಹನೀಯರು ಎಂದರು.

ಈ ಸಂದರ್ಭ ಸ್ಥಳೀಯ ಪಂಚಾಯತ್ ಸದಸ್ಯರು ಹಾಗೂ ರಿಕ್ಷಾ ಮಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/06/2022 10:04 am

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ