ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಂಚನಕೆರೆ: ಕೃತಕ ನೆರೆ;ಪಂಚಾಯತ್ ಮೂಲಕ ಕಾರ್ಯಾಚರಣೆ

ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಸ್ಥಳೀಯ ಕೃಷಿಕ ರಘುನಾಥ ಕಾಮತ್ ಎಂಬವರ ಬಿತ್ತಿದ ಗದ್ದೆಗೆ ಹಾನಿ ಸಂಭವಿಸಿತ್ತು.

ಈ ಸಂದರ್ಭ ರಾಜ್ಯ ಹೆದ್ದಾರಿಗೆ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಕಿಲ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋಪಿನಾಥ ಪಡಂಗ ಹೇಳಿದ್ದಾರೆ.

ಬಳಿಕ ಪಂಚಾಯತ್ ನಿಂದ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿ ಬದಿ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷದಿಂದ ಭಾರೀ ಮಳೆಗೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಉಂಟಾಗುತ್ತಿರುವುದೇ ಅಲ್ಲದೆ ಡಾಮರು ನಾಶವಾಗಿ ರಸ್ತೆಯಲ್ಲಿ ಹೊಂಡಗಳು ಉಂಟಾಗಿದೆ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗುವುದು ಎಂದರು.

ಕಾರ್ಯಾಚರಣೆಯಲ್ಲಿ ಪಂಚಾಯತ್ ಪಿಡಿಓ ಪೂರ್ಣಿಮಾ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/07/2022 12:09 pm

Cinque Terre

4.11 K

Cinque Terre

0

ಸಂಬಂಧಿತ ಸುದ್ದಿ