ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರದ ಬಳಿಯಲ್ಲಿ ಹೆದ್ದಾರಿ ಸರ್ವಿಸ್ ರಸ್ತೆ ಕಾಮಗಾರಿ ಅರ್ಧಂಬರ್ಧ ನಡೆಸಿದ್ದು ಪೂರ್ಣಗೊಳಿಸಲು ಹೆದ್ದಾರಿ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಎಂದು ಸ್ಥಳೀಯ ನಾಗರಿಕರು ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಹೆದ್ದಾರಿ ಅರ್ಧಂಬರ್ಧ ಕಾಮಗಾರಿಯಿಂದ ಅನೇಕ ಅಪಘಾತಗಳು ಸಂಭವಿಸಿದ್ದು ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಹೆದ್ದಾರಿ ಇಲಾಖೆ ಅಧಿಕಾರಿಗಳು ಕ್ಯಾರೇ ಮಾಡುತ್ತಿಲ್ಲ ಎಂದು ಹೇಳಿದ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ಸರಿಪಡಿಸದಿದ್ದರೆ ಹೆದ್ದಾರಿ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಅವರನ್ನು ಸಮಾಧಾನಪಡಿಸಿ ಕೂಡಲೇ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸರ್ವಿಸ್ ರಸ್ತೆ ಕಾಮಗಾರಿ ನಡೆಸುವಂತೆ ಸೂಚನೆ ನೀಡಲಾಗುವುದು ಎಂದರು.
Kshetra Samachara
01/07/2022 03:29 pm