ಧರ್ಮಸ್ಥಳ:ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ರವರನ್ನು ಕೆಪಿಸಿಸಿ ಉಪಾಧ್ಯಕ್ಷರು ಮಾಜೀ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮಿಥುನ್ ರೈ ರವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ ಕೇಂದ್ರ ಸರಕಾರದಿಂದ ರಾಜ್ಯಸಭಾ ಸದಸ್ಯತ್ವ ಪದವಿಯಿಂದ ಮತ್ತಷ್ಟು ಜನ ಸೇವಕನಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲು ಪ್ರೋತ್ಸಾಹ ದೊರಕಿದ್ದು ಸರಕಾರಕ್ಕೆ ಚಿರಋಣಿಯಾಗಿದ್ದೇನೆ ಎಂದರು.
Kshetra Samachara
11/07/2022 10:19 am