ಧರ್ಮಸ್ಥಳ:ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್ ಹಾಗೂ ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸುಧೀರ್ ಕಣ್ಣೂರು, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
11/07/2022 08:24 pm