ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರಿಗೆ, ಅಂಗವಿಕಲರಿಗೆ ವಿವಿಧ ಸೌಲಭ್ಯ

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ ರೂ. 2.50ಲಕ್ಷ ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ2022-23ನೇ ಸಾಲಿನ ಎಸ್.ಎಫ್.ಸಿ ಶೇಕಡ 29% ಮತ್ತು ನಗರ ಪಂಚಾಯತ್ ನಿಯಮದಡಿ 24.10% ರಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಗೆ ಕಾಯ್ದಿರಿಸಿದ ಮೊತ್ತದಲ್ಲಿ ವಿದ್ಯಾರ್ಥಿ ವೇತನ ಹಾಗೂ ಮನೆ ದುರಸ್ತಿಗೆ ಮತ್ತು ಶೇಕಡ 7.25 ರ ಬಡ ಜನರ ಕಲ್ಯಾಣ ಕಾರ್ಯಕ್ರಮ ನಿಯಮದಡಿ ವಿದ್ಯಾರ್ಥಿ ವೇತನ, ಶೌಚಾಲಯ ನಿರ್ಮಾಣ ಹಾಗೂ ಶೇಕಡ 5 ರ ಅಂಗವಿಕಲ ಕಲ್ಯಾಣ ಕಾರ್ಯಕ್ರಮದಡಿ ಅಂಗವಿಕಲರನ್ನು ಪೋಷಿಸುವವರಿಗೆ ಪೋಷಣಾ ಭತ್ಯೆ ಸಹಾಯಧನವನ್ನು ನೀಡಲಾಗುವುದು.

ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-08-2022

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಲ್ಕಿ ನಗರ ಪಂಚಾಯತ್ ಕಚೇರಿಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Edited By : PublicNext Desk
Kshetra Samachara

Kshetra Samachara

16/07/2022 09:45 pm

Cinque Terre

3.39 K

Cinque Terre

0

ಸಂಬಂಧಿತ ಸುದ್ದಿ