ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗೃಹ ಬಳಕೆಯ ಕುಡಿಯುವ ನೀರಿನ ದರವನ್ನು ಇಳಿಸಿ ಮುಖ್ಯಮಂತ್ರಿ ಆದೇಶ

ಮಂಗಳೂರು: ನಾಗರಿಕರ ಮನವಿಯಂತೆ ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಅನುಮೋದನೆಗೊಂಡು ರಾಜ್ಯ ಸರಕಾರಕ್ಕೆ ಕಳುಹಿಸಿದ ನಮ್ಮ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಸರಕಾರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆಯ ಕುಡಿಯುವ ನೀರಿನ ದರವನ್ನು ಇಳಿಸಿ ಆದೇಶ ಹೊರಡಿಸಿದೆ.

ಇದಕ್ಕಾಗಿ ಪಾಲಿಕೆ ವ್ಯಾಪ್ತಿಯ ಸಮಸ್ತ ನಾಗರಿಕರ ಪರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ, ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ,ಉಸ್ತುವಾರಿ ಸಚಿವ ಸುನೀಲ್ ಕುಮಾರ್ ರವರಿಗೆ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ರವರಿಗೆ ಧನ್ಯವಾದಗಳು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/07/2022 05:11 pm

Cinque Terre

2.26 K

Cinque Terre

2