ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅದಾನಿ ಗ್ಯಾಸ್ ಪೈಪ್ ಲೈನ್ ಕಾಮಗಾರಿ ಅರ್ಧಂಬರ್ಧ ನಡೆದಿದೆ.
ಕಾರ್ನಾಡ್ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗ್ಯಾಸ್ ಪೈಪ್ ಲೈನ್ ಗೆ ಬಾರಿ ಗಾತ್ರದ ಹೊಂಡ ತೋಡಿ ಅರೆಬರೆ ಕಾಮಗಾರಿ ನಡೆಸಿ ಹಾಗೆಯೇ ಬಿಟ್ಟಿದ್ದಾರೆ.
ಭಾರೀ ಗಾತ್ರದ ಹೊಂಡ ಅಪಾಯಕಾರಿಯಾಗಿ ಪರಿಣಮಿಸಿದ್ದು ಈ ಭಾಗದಲ್ಲಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ಬಗ್ಗೆ ಅನೇಕ ಬಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ತಿಳಿಸಿದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಮುಲ್ಕಿ ನಗರ ಪಂಚಾಯತ್ ಸದಸ್ಯ ಯೋಗೀಶ್ ಕೋಟ್ಯಾನ್ ದೂರಿದ್ದು ಕೂಡಲೇ ಕಾಮಗಾರಿ ಪೂರ್ತಿಗೊಳಿಸುವಂತೆ ಒತ್ತಾಯಿಸಿದ್ದಾರೆ.
Kshetra Samachara
22/07/2022 05:56 pm