ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ

ಮಂಗಳೂರು: ನಗರದ ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರಿಗೆ ಭಾವಪೂರ್ಣ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ ದೇಶಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟ ಸೈನಿಕರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ, ಕಾರ್ಗಿಲ್ ಯುದ್ಧದಲ್ಲಿ ಸುಮಾರು 500 ಕ್ಕೂ ಹೆಚ್ಚು ಸೈನಿಕರು ದೇಶಕ್ಕಾಗಿ ಬಲಿದಾನ ಮಾಡಿ ಹುತಾತ್ಮರಾದರೂ. ಆಪರೇಷನ್ ವಿಜಯ್ ಮುಖಾಂತರ ಭಾರತ ಸೇನೆ ಪಾಕಿಸ್ತಾನವನ್ನು ಬಗ್ಗು ಬಡಿದ ಸವಿ ನೆನಪಿಗಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಎಂದು ದೇಶದೆಲ್ಲೆಡೆ ಆಚರಿಸಿ ದೇಶಕ್ಕೆ ಬಲಿದಾನ ಮಾಡಿದ ಸೈನಿಕರನ್ನು ಸ್ಮರಿಸುತ್ತಾ, ನಾವು ನಮ್ಮನ್ನು ದೇಶ ಸೇವೆಗಾಗಿ ಪುನರ್ ಸಮರ್ಪಿಸುವ ವಿಶೇಷ ದಿನ ಎಂದರು.

ಈ ಸಂಧರ್ಭದಲ್ಲಿ ಕಛೇರಿ ಅಧೀಕ್ಷಕ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ. ಎಸ್, ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ ಶೇರಾ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/07/2022 04:39 pm

Cinque Terre

2.52 K

Cinque Terre

0

ಸಂಬಂಧಿತ ಸುದ್ದಿ