ಮಂಗಳೂರು:ಯುವವಾಹಿನಿ ಕೇಂದ್ರ ಸಮಿತಿ ವತಿಯಿಂದ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ದುಡಿದ ಪ್ರವೀಣ್ ನೆಟ್ಟಾರು ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಕೇಂದ್ರ ಸಮಿತಿಯ ಕಛೇರಿಯಲ್ಲಿ ನಡೆಯಿತು.
ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರು ಯುವವಾಹಿನಿ ಸಂಘಟನೆಗೆ ನೀಡಿದ ಕೊಡುಗೆ ಅಪಾರ, ಶ್ರಮಜೀವಿಯಂತೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಂಸ್ಥೆಗೆ ಆಧಾರ ಸ್ತಂಭವಾಗಿದ್ದರು, ಅವರ ಆತ್ಮಕ್ಕೆ ಭಗವಂತನು ಶಾಂತಿ ಕರುಣಿಸಲಿ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಉಪಾಧ್ಯಕ್ಷರುಗಳಾದ ರಾಜೇಶ್ ಬಂಟ್ವಾಳ,. ಹರೀಶ್ ಕೆ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರುಗಳು ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಕೇಂದ್ರ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Kshetra Samachara
31/07/2022 06:28 pm