ಮುಲ್ಕಿ: ಸೀಮೆಯ ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆಗಸ್ಟ್ 17ರ ಬುಧವಾರ ಸಿಂಹ ಸಂಕ್ರಮಣ ಶುಭದಿನದಂದು ಬೆಳಿಗ್ಗೆ ಎಂಟು ಗಂಟೆಯಿಂದ ವಿಶೇಷ ಪ್ರಾರ್ಥನೆಯೊಂದಿಗೆ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಲಿದೆ ಎಂದು ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹೇಳಿದರು.
ಅವರು ದೇವಸ್ಥಾನದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲೋಕಕಲ್ಯಾಣಾರ್ಥವಾಗಿ ಹಾಗೂ ದೇಶದ ಸುಭೀಕ್ಷೆಗೆ ಲಕ್ಷ ತುಳಸಿ ಅರ್ಚನೆ ಸಹಿತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಈ ಸಂದರ್ಭ ಅರ್ಚಕ ಪುರುಷೋತ್ತಮ ಭಟ್, ಅತಿಕಾರಿ ಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಕಲ್ಪನಾ, ಶಶಿಕಲಾ,ಸೀತಾರಾಮ್ ಭಟ್, ಗುರುಪ್ರಸಾದ್ ಭಟ್ ಮುಂಡ್ಕೂರು, ಉದ್ಯಮಿ ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಧಿಧನ್, ದೇವಸ್ಥಾನದ ಮ್ಯಾನೇಜರ್ ಕಿಶೋರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
03/08/2022 06:02 pm