ಸುರತ್ಕಲ್:ಸ್ವಾತಂತ್ರೋತ್ಸವದ ಕೊಡುಗೆಯಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವು ಘೋಷಣೆ ಮಾಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಆ ಮೂಲಕ ಇತ್ತೀಚೆಗೆ ಬಿಜೆಪಿ ಸರಕಾರ ಹಾಗೂ ಜನಪ್ರತಿನಿಧಿಗಳ ವಿರುದ್ದ ಎದ್ದಿರುವ ಜನಾಕ್ರೋಶದ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನ ನಡೆಸುತ್ತಾರೆ ಎಂಬ ನಿರೀಕ್ಷೆಯೂ ಇತ್ತು.
ಆದರೆ, ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕ ಸಂಗ್ರಹದ ಒಂದು ವರ್ಷದ ಅವಧಿಯ ಗುತ್ತಿಗೆ ನವೀಕರಣ ಇಂದು ಅಧಿಕೃತವಾಗಿ ನಡೆದಿದೆ. 13 ಲಕ್ಷ ಇದ್ದ ದಿನದ ಸಂಗ್ರಹದ ಟಾರ್ಗೆಟ್ ಅನ್ನು 12 ಲಕ್ಷಕ್ಕೆ ಇಳಿಸಲಾಗಿದೆ. ಆ ಮೂಲಕ ಗುತ್ತಿಗೆದಾರರ, ಅವರಿಂದ ಕಮೀಷನ್ ಪಡೆಯುವವರ ಜೇಬು ಮತ್ತಷ್ಟು ದಪ್ಪ ಆಗಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಶಾಸಕರುಗಳು ಅಂದರೆ ಇಷ್ಟೆ. ಜನ ದಂಗೆ ಏಳದೆ ಸುರತ್ಕಲ್ ಟೋಲ್ ಲೂಟಿಗೆ ಅಂತ್ಯ ಕಷ್ಟ ಸಾಧ್ಯಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
08/08/2022 08:09 pm